ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿಟ್ಟ 18ಎ ನಿವೇಶನವನ್ನು ಖಾಸಗಿ ವ್ಯಕ್ತಿಗಳಿಗೆ ಮಾಡಿಕೊಟ್ಟ ಆರೋಪದ ಮೇಲೆ ಮೂವರು ಪಿಡಿಒ (PDO)ಗಳನ್ನು ಅಮಾನತು ಮಾಡಿ ಹಾಸನ ಜಿಲ್ಲಾ ಪಂಚಾಯಿತಿ ಸಿಇಒ ಪೂರ್ಣಿಮಾ ಅವರು ಆದೇಶ ಹೊರಡಿಸಿದ್ದಾರೆ.
ಚನ್ನರಾಯಪಟ್ಟಣ ತಾಲ್ಲೂಕಿನ ಬಳದರೆ ಗ್ರಾಮಪಂಚಾಯತ್ ನಲ್ಲಿ ಕೆಲಸ ಮಾಡುತ್ತಿದ್ದ ಮೂವರು ಪಿಡಿಓಗಳು ಅಮಾನತುಗೊಂಡಿದ್ದಾರೆ.
ಡಿ.ಕಾಳೇನಹಳ್ಳಿ ಪಿಡಿಓ ಆಗಿರುವ ಸಿ.ಎನ್.ನವೀನ್, ಕೆಂಬಾಳು ಪಿಡಿಒ ಕೃಷ್ಣೇಗೌಡ, ಡಿ.ಬಳದರೆ ಹಾಗೂ ದಿಂಡಗೂರು ಪಿಡಿಓ ಆಗಿರುವ ರಾಮಸ್ವಾಮಿ ಅಮಾನತುಗೊಂಡವರು.