ನಕಲಿ ಮದ್ಯ ಸೇವಿಸಿ ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಲಬೆರಕೆ ಮದ್ಯ ಸೇವಿಸಿ ಮೂವರು ಸಾವನ್ನಪ್ಪಿರುವ ಘಟನೆ ಬಿಹಾರದ ಸೀತಾಮರ್ಹಿ ಜಿಲ್ಲೆಯಲ್ಲಿ ನಡೆದಿದೆ. ಇನ್ನು ಇಬ್ಬರ ಸ್ಥಿತಿ ಗಂಭಿರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ನಕಲಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ.

ರೋಷನ್ ರಾಯ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರು ಆತನ ಕುಟುಂಬ ಸದಸ್ಯರೊಂದಿಗೆ ಸಂಪರ್ಕದಲ್ಲಿದ್ದಾರೆ. ಕಲಬೆರಕೆ ಮದ್ಯ ಸೇವಿಸಿ ಮತ್ತಿಬ್ಬರು ಮೃತಪಟ್ಟಿರುವುದು ತನಿಖೆಯ ವೇಳೆ ಪೊಲೀಸರಿಗೆ ಪತ್ತೆಯಾಗಿದೆ.

ಆರೋಪಿಗಳಿಂದ ಸುಮಾರು 90 ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ. 2016 ರಲ್ಲಿ ನಿತೀಶ್ ಕುಮಾರ್ ಸರ್ಕಾರ ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಿತು. ಆದರೂ, ರಾಜ್ಯದಲ್ಲಿ ಅಕ್ರಮ ಮದ್ಯ ಸಾಗಾಟ ಪ್ರಕರಣಗಳು ದಾಖಲಾಗುತ್ತಲೇ ಇವೆ. ಈ ವರ್ಷದ ಏಪ್ರಿಲ್‌ನಲ್ಲಿ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ಕಲಬೆರಕೆ ಮದ್ಯ ಸೇವಿಸಿ 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!