ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ತಂದೆಯೊಂದಿಗೆ ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಕಲ್ಲಪ್ಪ ಗಾಣಿಗೇರ (36), ಮಕ್ಕಳಾದ ಮನೋಜ ಕಲ್ಲಪ್ಪ ಗಾಣಿಗೇರ (11) ಹಾಗೂ ಮದನ ಕಲ್ಲಪ್ಪ ಗಾಣಿಗೇರ (9) ಮೃತಪಟ್ಟವರು.
ಕಲ್ಲಪ್ಪ ಅವರು ವೃತ್ತಿಯಲ್ಲಿ ಸರ್ಕಾರಿ ಶಿಕ್ಷಕರಾಗಿದ್ದು, ಗಾಣಿಗೇರ ಗ್ರಾಮದ ಹುಕ್ಕೇರಿ ತೋಟದ ಮಗದುಮ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕೃಷಿ ಹೊಂಡದಲ್ಲಿ ಮಕ್ಕಳೊಂದಿಗೆ ಈಜುತ್ತಿದ್ದ ವೇಳೆ ದುರಂತ ಸಂಭವಿಸಿದೆ.
ಪತಿ, ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.