ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಆರ್‌ಎಸ್ ಜಲಾಶಯದ ಹಿನ್ನೀರಿನಲ್ಲಿ ಈಜಲು ಹೋದ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ನಡೆದಿದೆ.
ಹರೀಶ್ (32), ನಂಜುಂಡ ಮತ್ತು ಜ್ಯೋತಿ (18) ಮೃತರು ಎಂದು ಗುರುತಿಸಲಾಗಿದೆ. ಈಗಾಗಲೆ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಹರೀಶ್ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ.
ರಜೆ ಹಿನ್ನೆಲೆಯಲ್ಲಿ 25 ಮಂದಿ ಎನ್‌ಜಿಒ ಸಿಬ್ಬಂದಿಗಳು ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ಕೆಆರ್‌ಎಸ್ ಜಲಾಶಯದ ಹಿನ್ನೀರಿನಲ್ಲಿ ಈಜಲೆಂದು ನೀರಿಗೆ ಇಳಿದಿದ್ದಾರೆ. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಮೃತಪಟ್ಟಿದ್ದಾರೆ. ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.