ನೀರಿಗೆ ವಿಷ ಬೆರೆಸಿ ಕುಡಿದು ಆತ್ಮಹತ್ಯೆಗೆ ಶರಣಾದ ಒಂದೇ ಕುಟುಂಬದ ಮೂವರು

ಹೊಸದಿಗಂತ ವರದಿ ಚಿತ್ರದುರ್ಗ:

ಒಂದೇ ಕುಟುಂಬದ ಮೂರುಜನ ಮಹಿಳೆಯರು ಕುಡಿಯುವ ನೀರಿನಲ್ಲಿ ವಿಷ ಬೆರೆಸಿ ಕುಡಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಸೇವಿಸಿ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಗುರುವಾರ ಬೆಳಕಿಗೆ ಬಂದಿದೆ.

ಮೃತರನ್ನು ಗೋಪನಹಳ್ಳಿ ಗ್ರಾಮದ ದಲಿತ ಕಾಲೋನಿಯ ಮಂಗೇರ ತಿಪ್ಪಜ್ಜಿ (70), ಪುತ್ರಿಯರಾದ ಮಾರಕ್ಕ (45) ಹಾಗೂ ದ್ಯಾಮಕ್ಕ (35) ಎಂದು ಗುರುತಿಸಲಾಗಿದೆ. ತಿಪ್ಪಜ್ಜಿಯ ಗಂಡ ಕೆಂಚಪ್ಪ ಒಂದು ವರ್ಷದ ಹಿಂದೆ ಮೃತಪಟ್ಟಿದ್ದರು. ಕಳೆದ ತಿಂಗಳು ಅ.26 ರಂದು ತಿಪ್ಪಜ್ಜಿಯ ಮಗ ದ್ಯಾಮಣ್ಣ ಮೃತಪಟ್ಟಿದ್ದರು. ಇದರಿಂದ ಮನೆಯ ನಿರ್ವಹಣೆ ಕಷ್ಟವಾಗಿತ್ತು. ಮನೆಯ ಪರಿಸ್ಥಿತಿಯಿಂದ ಮನ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಬುಧವಾರ ಬೆಳಗಿನಜಾವ ಮನೆಯಿಂದ ಹೊರಗೆ ಹೋದವರು ಮತ್ತೆ ಮನೆಯೊಳಗೆ ಸೇರಿಕೊಂಡಿದ್ದರು. ಗುರುವಾರ ದಿನಪೂರ್ತಿ ಯಾರೂ ಹೊರಗೆ ಬಂದಿರಲಿಲ್ಲ. ಸಂಜೆಯಾದರೂ ಯಾರೂ ಹೊರಗೆ ಬರದ ಕಾರಣ ಸಂಶಯಗೊಂಡ ಅಕ್ಕಪಕ್ಕದವರು ಬಾಗಿಲು ಬಡಿದಿದ್ದಾರೆ. ಆದರೆ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಕಿಟಕಿಯಿಂದ ನೀರು ಎರಚಿದರೂ ಒಳಗೆ ಮಲಗಿದಗದವರು ಎಚ್ವರವಾಗಿಲ್ಲ.

ಇದರಿಂದ ಆತಂಕಗೊಂಡ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮನೆಯ ಬಾಗಿಲು ಹೊಡೆದು ಒಳಹೋಗಿ ನೋಡಿದಾಗ ಮೂರು ಜನ ಮಹಿಳೆಯರು ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!