ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ಮೂವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗೌರಿಬಿದನೂರಿನ ತೊಂಡೆಬಾವಿ ರೈಲ್ವೆ ನಿಲ್ದಾಣದ ಬಳಿ ರೈಲಿಗೆ ಸಿಕ್ಕ ಮೂರು ಮೃತದೇಹಗಳು ಪತ್ತೆಯಾಗಿವೆ.

ಒಬ್ಬ ಪುರುಷ ಹಾಗೂ ಇಬ್ಬರು ಮಹಿಳೆಯರ ದೇಹದ ಭಾಗಗಳು ರೈಲ್ವೆ ಹಳಿಯ ಸುತ್ತಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ವ್ಯಕ್ತಿಯ ಶರ್ಟ್‌ಮೇಲೆ ವಿನಾಯಕ ಟೈಲರ್ ಗೌರಿಬಿದನೂರು ಎಂಬ ಗುರುತು ಕಂಡಿದೆ. ಇವರೆಲ್ಲರೂ ಒಂದೇ ಕುಟುಂಬದ ಸದಸ್ಯರಿರಬಹುದು ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಇವರು ಒಂದೇ ಕುಟುಂಬದವರು, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!