March 19, 2026
Thursday, March 19, 2026
spot_img

ಅನುಮಾನಾಸ್ಪದ ವಸ್ತು ಸ್ಫೋಟ: ಬಾಲಕ ಸೇರಿ ಮೂವರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ಸಂಭವಿಸಿದ ಅನುಮಾನಾಸ್ಪದ ಸ್ಫೋಟದ ಘಟನೆ ಗ್ರಾಮದಲ್ಲಿ ಆತಂಕ ಮೂಡಿಸಿದೆ. ಅಚಾನಕ್ ಸ್ಫೋಟಗೊಂಡ ವಸ್ತುವಿನಿಂದ ಓರ್ವ ಬಾಲಕ ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ವೇಳೆ ಸಮೀಪದಲ್ಲೇ ಮಕ್ಕಳು ಮತ್ತು ಯುವಕರು ಇದ್ದುದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಗಾಯಗೊಂಡವರಲ್ಲಿ ಮೂವರ ಮುಖ, ಕೈ ಮತ್ತು ದೇಹದ ಭಾಗಗಳು ತೀವ್ರವಾಗಿ ಸುಟ್ಟಿದ್ದು, ಅವರನ್ನು ತಕ್ಷಣ ಬೀದರ್‌ನ ಬ್ರೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನ್ವರ್ ಪಷಾ ಎಂಬ ಯುವಕನ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಹೈದ್ರಾಬಾದ್‌ಗೆ ರವಾನಿಸಲಾಗಿದೆ. ಇನ್ನು 65 ವರ್ಷದ ಜಬ್ಬಾರ್ ಸಾಬ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಸೋಲ್ಲಾಪುರ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:

ಸ್ಫೋಟ ಸಂಭವಿಸಿದ ಸಮಯದಲ್ಲಿ ಸ್ಥಳದ ಬಳಿ ಆರು ಮಂದಿ ಮಕ್ಕಳು ಮತ್ತು ಇಬ್ಬರು ಯುವಕರು ನಿಂತಿದ್ದರು ಎನ್ನಲಾಗಿದ್ದು, ಹೆಚ್ಚಿನ ಪ್ರಾಣಾಪಾಯ ತಪ್ಪಿದ್ದು ಅದೃಷ್ಟಕರವಾಗಿದೆ. ಸ್ಫೋಟಕ್ಕೆ ಕಾರಣವಾದ ವಸ್ತು ಯಾವುದು ಎಂಬುದರ ಕುರಿತು ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

ಘಟನೆಯ ಸುದ್ದಿ ತಿಳಿದ ತಕ್ಷಣ ಆಸ್ಪತ್ರೆ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಫೋಟದ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !