ಖ್ಯಾತ ಚಿತ್ರನಟಿ ತಾರಾ ಸೇರಿದಂತೆ ಮೂವರಿಗೆ ಮಹಿಳಾ ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ

ದಿಗಂತ ವರದಿ ವಿಜಯಪುರ:

ಇಲ್ಲಿನ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಆವರಣದಲ್ಲಿ ಗುರುವಾರ ಹಮ್ಮಿಕೊಂಡ 16 ನೇ ಘಟಿಕೋತ್ಸವದಲ್ಲಿ ಮಹಿಳಾ ವಿವಿ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ತೊರಿದ ಖ್ಯಾತ ಚಿತ್ರನಟಿ ತಾರಾ ಸೇರಿದಂತೆ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.

ಸಿನಿಮಾ ಕ್ಷೇತ್ರದ ಸಾಧನೆಗಾಗಿ ಖ್ಯಾತ ಚಲನಚಿತ್ರ ನಟಿ ತಾರಾ, ಕಲಾಕ್ಷೇತ್ರದ ಸಾಧನೆಗಾಗಿ ಶಿಗ್ಗಾವಿಯ ಗೋಟಗೋಡಿ ರಾಕ್‌ ಗಾರ್ಡನ್ ನ ವೇದರಾಣಿ ದಾಸನೂರು ಹಾಗೂ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಕಲಬುರಗಿಯ ವಿಶ್ರಾಂತ ಪ್ರಾಧ್ಯಾಪಕಿ ಡಾ.ಮೀನಾಕ್ಷಿ ಬಾಳಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ನವದೆಹಲಿಯ ರಾಷ್ಟ್ರೀಯ ಶೈಕ್ಷಣಿಕ ಯೋಜನೆ ಮತ್ತು ಆಡಳಿತ ಸಂಸ್ಥೆಯ ಕುಲಪತಿ ಪ್ರೊ.ಶಶಿಕಲಾ ವಂಜಾರಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್, ಸಿಂಡಿಕೇಟ್ ಸದಸ್ಯರು, ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ವಿವಿಧ ನಿಕಾಯಗಳ ಡೀನರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!