Sunday, October 1, 2023

Latest Posts

ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ: ಮೂವರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಲಕ್ನೋದ ಹಜರತ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದ್ದು, ರಸ್ತೆಬದಿಯಲ್ಲಿ ಆಟೋ ನಿಲ್ಲಿಸಿ ಮಲಗಿದ್ದ ಚಾಲಕನ ಮೇಲೆ ಕಾರೊಂದು ಹರಿದಿದೆ. ಬಳಿಕ ಸಂಕಲ್ಪ್ ವಾಟಿಕಾದ ಗೋಮತಿ ಸೇತುವೆ ಬಳಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾಗಿದೆ.

ಈ ವೇಳೆ ಕಾರಿನಲ್ಲಿದ್ದ ಇಬ್ಬರು ಮತ್ತು ರಸ್ತೆಬದಿಯಲ್ಲಿ ಆಟೋ ನಿಲ್ಲಿಸಿ ನಿದ್ದೆಗೆ ಜಾರಿದ್ದ ಚಾಲಕ ಸೇರಿದಂತೆ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!