ಟ್ರಕ್ ಚಾಲಕನ ನಿರ್ಲಕ್ಷ್ಯಕ್ಕೆ 3 ಸಾವು, 4 ಮಂದಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನೆಲ್ಲೂರು ಜಿಲ್ಲೆಯ ಮನುಬೋಳು ಮಂಡಲದ ಬದ್ವೇಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊಡವಲೂರು ಮಂಡಲದ ದಾಮೆಗುಂಟಾ ಗ್ರಾಮದ ಎರಡು ಕುಟುಂಬಗಳು ಚೆನ್ನೈಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ನಿಮಿಷಕ್ಕೆ ಹತ್ತಾರು ವಾಹನಗಳು ಸಂಚರಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಮ ಉಲ್ಲಂಘಿಸಿ ಚಾಲಕ ಟ್ರಕ್ ನಿಲ್ಲಿಸಿದ್ದಾನೆ.

ಇನ್ನೋವಾ ಚಾಲಕ ನಿಂತಿದ್ದ ಟ್ರಕ್‌ಗೆ ಹಿಂಬದಿಯಿಂದ ಅತಿವೇಗದಿಂದ ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತದ ವಿಷಯ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಗುಡೂರು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಿದ್ದಾರೆ. ಇವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!