Tuesday, November 4, 2025

ಬೆಂಗಳೂರಿನಲ್ಲಿ ಭಾರೀ ಮಳೆಗೆ ಮುರಿದು ಬಿದ್ದ ಕೊಂಬೆ: ಕೂದಲೆಳೆ ಅಂತರದಲ್ಲಿ ಮೂವರು ಪಾರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:
 
ಕರ್ನಾಟಕದಲ್ಲಿ ಹಿಂಗಾರು ಮಳೆಯ ಆರ್ಭಟ ಜೋರಾಗಿದೆ. ನಿರಂತರ ಮಳೆಗೆ ಬೆಂಗಳೂರು ನಗರದಲ್ಲಿ ಹಲವೆಡೆ ಮರಗಳು ಧರೆಗೆ ಉರುಳಿವೆ. ಏಕಾಏಕಿ ಬೃಹತ್ ಮರದ ಕೊಂಬೆ ರಸ್ತೆಗೆ ಉರುಳಿ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಮೂವರು ಪಾರಾಗಿದ್ದಾರೆ.

ನಗರದಲ್ಲಿ ರಾತ್ರಿ ಸುರಿದ ಮಳೆಗೆ ಅಲಿ ಆಸ್ಗರ್ ರಸ್ತೆಯ ಪೊಲೀಸ್ ಕಮಿಷನರ್​​ ಕಚೇರಿ ಹಿಂದಿನ ಗೇಟ್​​ ಬಳಿ ಬೆಳಗ್ಗೆ 7:30 ರ ವೇಳೆಗೆ ಬೃಹತ್ ಮರದ ಕೊಂಬೆ ಏಕಾಏಕಿ ರಸ್ತೆಗೆ ಉರುಳಿ ಬಿದ್ದ ಘಟನೆ ನಡೆದಿದೆ. ಓರ್ವ ಟ್ರಾಫಿಕ್ ಪೊಲೀಸ್, ಸೆಕ್ಯೂರಿಟಿ ಗಾರ್ಡ್ ಮತ್ತು ಬಿಬಿಎಂಪಿ ಸಿಬ್ಬಂದಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಆ ಮೂಲಕ ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದೆ.

ಇನ್ನು ಈ ಬಗ್ಗೆ ಬೆಂಗಳೂರು ಸಂಚಾರಿ ಪೊಲೀಸರು ಟ್ವೀಟ್​ ಮಾಡಿದ್ದು, ಅಲಿ ಅಸ್ಕರ್ ರಸ್ತೆಯಲ್ಲಿ ಮರ ಬಿದ್ದ ಪರಿಣಾಮ ಕನ್ನಿಂಗ್‌ಹ್ಯಾಮ್ ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಪ್ರಯಾಣಿಕರು ಪರ್ಯಾಯ ಮಾರ್ಗವಾಗಿ ಇನ್‌ಫೆಂಟ್ರಿ ರಸ್ತೆಯನ್ನು ಬಳಸುವಂತೆ ಸೂಚಿಸಿದ್ದಾರೆ.

error: Content is protected !!