ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಲೆಗೆ ಬಿದ್ದು ಒಂದೇ ಕುಟುಂಬದ ಮೂವರು ನೀರುಪಾಲಾಗಿರುವ ದುರಂತ ಘಟನೆ ಮೈಸೂರು ಜಿಲ್ಲೆ ಸರಗೂರು ಸಮೀಪದ ಚಂಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸರಗೂರು ತಾಲೂಕಿನ ಚಂಗೌಡನಹಳ್ಳಿಯ ಮಹಮ್ಮದ್ ಕಪಿಲ್(42), ಶಾವರ ಭಾನು(38) ಪುತ್ರಿ ಶಾಹೀರಾ ಭಾನು(17) ಮೃತ ದುರ್ದೈವಿಗಳು.
ಅಜ್ಜಿಯ ತಿಥಿ ಕಾರ್ಯಕ್ಕಾಗಿ ಸರಗೂರಿನ ತಮ್ಮ ಸ್ವಗ್ರಾಮಕ್ಕೆ ಆಗಮಿಸಿದ್ದ ವೇಳೆ ನುಗು ಜಲಾಶಯದ ಬಲದಂಡೆ ನಾಲೆಯಲ್ಲಿ ಕೈ ಕಾಲು ತೊಳೆಯಲು ಹೋದಾಗ ಈ ದುರಂತ ಸಂಭವಿಸಿದೆ. ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ಮಗಳನ್ನು ರಕ್ಷಿಸಲು ತಾಯಿ ಮುಂದಾಗಿದ್ದಾರೆ, ಬಳಿಕ ತಾಯಿ ಕೂಡ ನೀರಿನಲ್ಲಿ ಮುಳುಗಿದ್ದಾರೆ. ಇಬ್ಬರನ್ನು ರಕ್ಷಿಸಲು ತಂದೆ ಕಪಿಲ್ ಮುಂದಾಗಿದ್ದು, ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.