Wednesday, February 21, 2024

ಉಳ್ಳಾಲದಲ್ಲಿ ಈಜಲು ತೆರಳಿದ್ದ ಮೂವರು ನೀರುಪಾಲು: ಓರ್ವನ ಶವ ಪತ್ತೆ, ಇನ್ನೋರ್ವ ನಾಪತ್ತೆ, ಓರ್ವ ರಕ್ಷಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಉಳ್ಳಾಲದ ದರ್ಗಾ ಸಂದರ್ಶನಗೈಯ್ಯಲು ಬಂದಿದ್ದ ಚಿಕ್ಕಮಗಳೂರು ಮೂಲದ ಮೂವರು ಯುವಕರು ಸಮುದ್ರಪಾಲಾಗಿದ್ದು, ಈ ಪೈಕಿ ಓರ್ವನನ್ನು ರಕ್ಷಿಸಲಾಗಿದೆ. ಇನ್ನಿಬ್ಬರು ಸಮುದ್ರಪಾಲಾಗಿದ್ದು , ಓರ್ವನ ಶವ ಪತ್ತೆಯಾಗಿದೆ.

ಚಿಕ್ಕಮಗಳೂರು ನಿವಾಸಿಗಳಾದ ಬಶೀರ್ (23), ಸಲ್ಮಾನ್ (19), ಸೈಫ್ ಆಲಿ (27) ಎಂಬವರು ಉಳ್ಳಾಲ ದರ್ಗಾ ಸಂದರ್ಶನಕ್ಕೆಂದು ಬಂದವರು ಉಳ್ಳಾಲದ ಸಮುದ್ರ ತೀರಕ್ಕೆ ತೆರಳಿದ್ದಾರೆ. ಅಲ್ಲಿ ಸಮುದ್ರದ ನೀರಲ್ಲಿ ಆಟವಾಡುತ್ತಿದ್ದ ಸಂದರ್ಭ ಮೂವರು ಅಲೆಗಳ ನಡುವೆ ಸಿಲುಕಿದ್ದಾರೆ. ತಕ್ಷಣ ಸ್ಥಳದಲ್ಲಿದ್ದ ಮೊಗವೀರ ಜೀವರಕ್ಷಕ ಸದಸ್ಯರು ಸಮುದ್ರಕ್ಕೆ ಹಾರಿ ಸೈಫ್ ಆಲಿ ಮತ್ತು ಸಲ್ಮಾನ್ ಇಬ್ಬರನ್ನು ಮೇಲಕ್ಕೆತ್ತಿದ್ದಾರೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಸಲ್ಮಾನ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಓರ್ವನ ಶವ ಪತ್ತೆಯಾಗಿಲ್ಲ. ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!