ಜಮ್ಮು-ಕಾಶ್ಮೀರದಲ್ಲಿ ಆಳವಾದ ಕಮರಿಗೆ ಬಿದ್ದು ಮೂವರು ಯೋಧರು ಹುತಾತ್ಮ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು-ಕಾಶ್ಮೀರದ ಗಡಿ ಜಿಲ್ಲೆಯ ಕುಪ್ವಾರದಲ್ಲಿ ಆಳವಾದ ಕಮರಿಗೆ ಬಿದ್ದು ಮೂವರು ಯೋಧರು ಹುತಾತ್ಮರಾಗಿದ್ದಾರೆ.

ಹಿಮದಿಂದ ಆವೃತವಾಗಿದ್ದ ಮಚಿಲ್ ಸೆಕ್ಟರ್‌ನಲ್ಲಿ ಆಳವಾದ ಕಮರಿಗೆ ಬಿದ್ದು ಜೂನಿಯರ್ ಕಮಿಷನ್ಡ್ ಆಫೀಸರ್ ಸೇರಿದಂತೆ ಮೂವರು ಸೇನಾ ಯೋಧರು ಹುತಾತ್ಮರಾಗಿದ್ದಾರೆ. ಬೆಳಗಿನ ಜಾವ ಸೈನಿಕರು ಗಸ್ತು ಹಾಕುತ್ತಿದ್ದ ವೇಳೆ ಕಮರಿಗೆ ಬಿದ್ದಿದ್ದಾರೆ ಎಂದು ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸೇನಾ ಯೋಧರ ಮೃತದೇಹಗಳನ್ನು ಹೊರತೆಗೆಯಲಾಗಿದೆ.

 

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!