Friday, August 19, 2022

Latest Posts

ಉತ್ತರ ದೆಹಲಿಯಲ್ಲಿ ಮೂರಂತಸ್ತಿನ ಕಟ್ಟಡ ಕುಸಿತ: ರಕ್ಷಣಾ ಕಾರ್ಯಾಚರಣೆ ಜಾರಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಉತ್ತರ ದೆಹಲಿಯ ಸಬ್ಜಿ ಮಂಡಿ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದುಬಿದ್ದಿದ್ದು, ಮಕ್ಕಳು ಸೇರಿ ಹಲವರು ಅವಶೇಷಗಳಡಿ ಸಿಲುಕಿದ್ದಾರೆ.
ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ.
ಈ ಬಗ್ಗೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಮಾತನಾಡಿದ್ದು, ಈ ಘಟನೆ ಅತ್ಯಂತ ದುಃಖಕರವಾಗಿದೆ. ಆಡಳಿತವು ಪರಿಹಾರ ಹಾಗೂ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಸ್ವತಃ ನಾನು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!