Sunday, December 3, 2023

Latest Posts

ಮೂರು ಅಂತಸ್ತಿನ ಕಟ್ಟಡ ಕುಸಿತ: ಕಾರ್ಮಿಕ ಸಾವು, ಇಬ್ಬರ ರಕ್ಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಓರ್ವ ಕಾರ್ಮಿ ಪ್ರಾಣ ಕಳೆದುಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮಂಗಳವಾರ ರಾತ್ರಿ 10.30ರ ಸುಮಾರಿಗೆ ಮಧ್ಯಪ್ರದೇಶದ ಸಾತ್ನಾ ಪಟ್ಟಣದ ಬಿಹಾರ ಚೌಕ್ ಬಳಿ ಈ ದುರಂತ ಘಟನೆ ನಡೆದಿದೆ. ಎಸ್‌ಡಿಆರ್‌ಎಫ್ ಹಾಗೂ ಪೊಲೀಸರು ಅವಶೇಷಗಳನ್ನು ತೆಗೆಯುವ ಕಾರ್ಯ ಕೈಗೊಂಡಿದ್ದಾರೆ. ರಕ್ಷಣಾ ಸಿಬ್ಬಂದಿ ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಇಬ್ಬರನ್ನು ರಕ್ಷಿಸಿದ್ದಾರೆ.

ಕಳೆದ 10 ದಿನಗಳಿಂದ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಆಡಳಿತ ಅಧಿಕಾರಿಗಳು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡದೊಂದಿಗೆ ಘಟನಾ ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯಗಳನ್ನು ಪ್ರಾರಂಭಿಸಿತು. ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡ ಕುಸಿತಕ್ಕೆ ಕಾರಣಗಳು ತಿಳಿದುಬಂದಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!