ಮೂರು ಅಂತಸ್ತಿನ ಕಟ್ಟಡ ಕುಸಿದು ಇಬ್ಬರ ಸಾವು, ಹಲವರು ಅವಶೇಷಗಳಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಂದು ಮಧ್ಯರಾತ್ರಿ ಮೂರು ಅಂತಸ್ತಿನ ಕಟ್ಟಡ ಒಮ್ಮೆಲೇ ಕುಸಿದು ಬಿದ್ದ ಪರಿಣಾಮವಾಗಿ ಇಬ್ಬರು ಸಾವನ್ನಪ್ಪಿದ್ದು, ಅವಶೇಷಗಳಡಿಯಲ್ಲಿ ಹಲವರು ಸಿಲುಕಿರುವ ಘಟನೆ ವಿಶಾಖಪಟ್ಟಣಂನ ರಾಮಜೋಗಿಪೇಟೆಯಲ್ಲಿ ನಡೆದಿದೆ. ಇದೊಂದು ಹಳೆಯ ಕಟ್ಟಡವಾಗಿದ್ದು, ಶಿಥಿಲಗಳಡಿ ಮಗುವಿನ ಶವ ಪತ್ತೆಯಾಗಿದೆ. ಗಾಯಗೊಂಡಿರುವವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸ್ಥಳಕ್ಕಾಗಮಿಸಿದ ಎನ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಅವಶೇಷಗಳಡಿ ಸಿಲುಕಿರುವ ಜನರನ್ನು ರಕ್ಷಿಸಲು ಹರಸಾಹಸ ಪಡುತ್ತಿದ್ದಾರೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ವಿಶಾಖ ಕೆಜಿಎಚ್ ಆಸ್ಪತ್ರೆಗೆ ರವಾನಿಸಲಾಗಿದೆ. ಮಾಹಿತಿ ಪಡೆದ ಆರ್‌ಡಿಒ ಸ್ಥಳಕ್ಕೆ ಆಗಮಿಸಿ ಅಪಘಾತದ ಬಗ್ಗೆ ವಿಚಾರಿಸಿದರು. ಪರಿಹಾರ ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ಆದೇಶಿಸಲಾಗಿದೆ. ಡಿಸಿಪಿ ಗರುಡ ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇತ್ತೀಚೆಗೆ ಸುರಿದ ಮಳೆಗೆ ಹಳೆಯ ಕಟ್ಟಡ ಕುಸಿದಿದೆ.

ಎರಡು ದಿನಗಳಿಂದ ಸುರಿದ ಮಳೆಗೆ ಕಟ್ಟಡ ಕುಸಿದು ಬಿದ್ದಿರುವುದು ಪ್ರಾಥಮಿಕ ಹಂತದಲ್ಲಿ ದೃಢಪಟ್ಟಿದ್ದು, ಮೃತ ಮಗು ಅಂಜಲಿ ನಿನ್ನೆ (ಬುಧವಾರ) ಹುಟ್ಟುಹಬ್ಬ ಆಚರಿಸಿಕೊಂಡಿದೆ. ಕಟ್ಟಡ ಕುಸಿತದ ವೇಳೆ ಕಟ್ಟಡದಲ್ಲಿ ಸುಮಾರು ಒಂಬತ್ತು ಮಂದಿ ಇದ್ದರು ಎಂದು ತಿಳಿದು ಬಂದಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!