ಮೂರು ಅಂತಸ್ತಿನ ಕಟ್ಟಡ ದಿಢೀರ್ ಕುಸಿತ, 10 ಮಂದಿ ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರೀ ಮಳೆಯಿಂದಾಗಿ ಉತ್ತರ ಪ್ರದೇಶದ ಮೀರತ್‌ನ ಜಾಕಿರ್ ಕಾಲೋನಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ.

ಇದುವರೆಗೆ ಅಧಿಕಾರಿಗಳು ಒಟ್ಟು ಐದು ಮಂದಿಯನ್ನು ಅವಶೇಷಗಳಿಂದ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಲಿಯಾದ ಹತ್ತು ಮಂದಿಯಲ್ಲಿ ಒಂದು ವರ್ಷದ ಮಗು ಸೇರಿದಂತೆ ನಾಲ್ಕು ಮಕ್ಕಳು ಸೇರಿದ್ದಾರೆ.

ಮಳೆಯಿಂದಾಗಿ ಕಟ್ಟಡ ಕುಸಿದಿದೆ ಎಂದು ಮೀರತ್ ಜಿಲ್ಲಾ ಮ್ಯಾಜಿಸ್ಟ್ರೇಟ್ ದೀಪಕ್ ಮೀನಾ ತಿಳಿಸಿದ್ದಾರೆ. ಭಾರೀ ಮಳೆಯ ನಡುವೆಯೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡಗಳು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!