ಹೊಸದಿಗಂತ ಡಿಜಿಟಲ್ ಡೆಸ್ಕ್:
ನವದೆಹಲಿಯ ಮುಸ್ತಫಾಬಾದ್ ಪ್ರದೇಶದಲ್ಲಿ ಭಾನುವಾರ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ಓರ್ವ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ . ಈ ಕುರಿತು ಮೂಲಗಳು ವರದಿ ಮಾಡಿದ್ದು ಅವಶೇಷಗಳಡಿ ಇನ್ನೂ ಕೆಲವರು ಸಿಲುಕಿದ್ದಾರೆ ಎನ್ನಲಾಗಿದೆ.
ನಾಲ್ವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಯುತ್ತಿದೆ.
ಮುಂಜಾನೆ 5 ಗಂಟೆಗೆ ಈ ಘಟನೆ ವರದಿಯಾಗಿದ್ದು, ಮೂರು ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿದವು ಎಂದು ದೆಹಲಿ ಅಗ್ನಿಶಾಮಕ ಸೇವೆಯ ನಿರ್ದೇಶಕ ಅತುಲ್ ಗಾರ್ಗ್ ಹೇಳಿದ್ದಾರೆ.ಅಧಿಕಾರಿಗಳ ಪ್ರಕಾರ, ಮೂರು ಅಂತಸ್ತಿನ ಕಟ್ಟಡದ ಮೊದಲ ಮತ್ತು ಎರಡನೇ ಮಹಡಿ ಕುಸಿದಿದೆ. ಮುಸ್ತಫಾಬಾದ್‌ನ ಬಾಬು ನಗರ ಚಾನೆ ವಾಲಿ ಗಲಿ ಬಳಿ ಈ ಘಟನೆ ನಡೆದಿದೆ ಎಂದು ಮೂಲಗಳು ಹೇಳಿವೆ.