ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆ. ಆರ್.ಸಾಗರ (ಕೃಷ್ಣರಾಜ ಸಾಗರ)ದ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೈಸೂರಿನ ಸಂತ ಜೋಸೆಫ್ ಕಾಲೇಜಿನ ವಿದ್ಯಾರ್ಥಿಗಳಾದ ಪ್ರವೀಣ್, ವರುಣ್, ಭರತ್ ಮೃತರು. ಇವರೆಲ್ಲ ಬಿಸಿಎ ಎರಡನೇ ವರ್ಷದಲ್ಲಿ ಓದುತ್ತಿದ್ದರು. ಸ್ನೇಹಿತರೆಲ್ಲ ಸೇರಿ ಕೃಷ್ಣರಾಜಸಾಗರ ಹಿನ್ನೀರಿನ ಬಳಿ ಈಜಲು ತೆರಳಿದ್ದರು. ಈ ವೇಳೆ ನೀರಿನ ಸೆಳೆತ ಜಾಸ್ತಿ ಇದ್ದಿದ್ದರಿಂದ ಈಜಲು ಸಾಧ್ಯವಾಗದೆ, ಈ ಮೂರು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳ ಪತ್ತೆಗೆ ಹುಡುಕಾಟ ನಡೆಸಿದ್ದಾರೆ. ಇಲವಾಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.