ಬುದ್ಗಾಂನಲ್ಲಿ ಗುಂಡಿನ ದಾಳಿ: ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನಾಪಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಮ್ಮು ಕಾಶ್ಮೀರದ ಬುದ್ಗಾಂನಲ್ಲಿ ಭಾರತೀಯ ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ನಡೆದಿದೆ. ಎನ್‌ ಕೌಂಟರ್‌ ನಲ್ಲಿ ಮೂವರು ಉಗ್ರರನನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
ಈ ಬಗ್ಗೆ ಎಎನ್‌ ಐ ಸುದ್ದಿ ಸಂಸ್ಥೆ ವರದಿ ಮಾಡಿದ್ದು, ಬುದ್ಗಾಂನ ಝೋಲ್ವಾ ಕ್ರಾಲ್ಪೋರಾ ಚದೂರ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಪಡೆದ ಸೇನೆ, ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಸೇನಾಪಡೆಯ ಮೇಲೆ ಏಕಾಏಕಿ ದಾಳಿ ನಡೆಸಿದೆ. ದಾಳಿ ಮಾಡಿದ ಉಗ್ರರಿಗೆ ಯೋಧರು ಸೂಕ್ತ ಪ್ರತ್ಯುತ್ತರ ನೀಡಿದ್ದು, ಮೂವರು ಉಗ್ರರನ್ನು ಸದೆಬಡಿದಿದ್ದಾರೆ.
ಉಗ್ರರ ಬಳಿ ಇದ್ದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹತ್ಯೆಯಾದ ಉಗ್ರರ ಗುರುತಿಗಾಗಿ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!