ಹೊಸ ದಿಗಂತ ವರದಿ,ಮೈಸೂರು:
ಇಲ್ಲಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಏ.26ರಂದು ಜನ್ಮ ತಾಳಿದ್ದ ಮೂರು ಹುಲಿ ಮರಿಗಳ ವೀಕ್ಷಣೆಗೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು.
ಮೃಗಾಲಯದ ಗಂಡು ಹುಲಿ ರಾಕಿ ಹಾಗೂ ಹೆಣ್ಣು ಹುಲಿ ತಾರಾಗೆ ಸದರಿ ಮರಿಗಳು ಜನಿಸಿದ್ದವು. ಅಂದಿನಿoದ ವೀಕ್ಷಣೆಗೆ ಬಿಟ್ಟಿರಲಿಲ್ಲ. ಮರಿಗಳ ಆರೈಕೆಯನ್ನು ಮಾಡಲಾಗುತ್ತಿತ್ತು. ಇದೀಗ ಈ ಮೂರು ಮರಿಗಳನ್ನು ಪ್ರವಾಸಿಗರ ವೀಕ್ಷಣೆಗೆ ಅವಕಾಶ ಮಾಡಿಕೊಡಲು ನಿರ್ಧರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಂಜೆ ಪ್ರವಾಸಿಗರ ವೀಕ್ಷಣೆಗೆ ಮುಕ್ತಗೊಳಿಸಲಾಗಿತು.
ಈ ವೇಳೆ ಶಾಸಕ ಎಸ್.ಎ.ರಾಮದಾಸ್, ನಗರಪಾಲಿಕೆಯ ಮೇಯರ್ ಶಿವಕುಮಾರ್, ಉಪ ಮೇಯರ್ ರೂಪ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ್, ಮುಡಾ ಅಧ್ಯಕ್ಷ ಯಶಸ್ವಿ ಎಸ್.ಸೋಮಶೇಖರ್, ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ಕುಲಕರ್ಣಿ, ನಗರ ಬಿಜೆಪಿ ಅಧ್ಯಕ್ಷ ಶ್ರೀವತ್ಸ, ಮೃಗಾಲಯ ಪ್ರಾಧಿಕಾರದ ಸದಸ್ಯರಾದ ಗೋಕುಲ್ ಗೋವರ್ದನ್, ಜ್ಯೋತಿ ರೇಚಣ್ಣ, ವರುಣ ಕ್ಷೇತ್ರದ ಜಿಪಂ ಮಾಜಿ ಸದಸ್ಯ ಸಚ್ಚಿದಾನಂದ ಇನ್ನಿತರರು ಉಪಸ್ಥಿತರಿದ್ದರು.