March 30, 2026
Monday, March 30, 2026
spot_img

ಬಾಡಿವಾರ್ನ್ ಕ್ಯಾಮೆರಾ ಆಫ್ ಮಾಡಿ ಹಣ ಅಕ್ರಮ ವಸೂಲಿಗೆ ಯತ್ನ: ಮೂವರು ಟ್ರಾಫಿಕ್ ಪೊಲೀಸರು ಸಸ್ಪೆಂಡ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ವಾಹನ ಸವಾರರಿಂದ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಈ ಕುರಿತು ಪಶ್ಚಿಮ ವಿಭಾಗದ ಸಂಚಾರಿ ಡಿಸಿಪಿ ಅನೂಪ್ ಶೆಟ್ಟಿ ಅದೇಶ ಹೊರಡಿಸಿದ್ದು, ಬೆಂಗಳೂರಿನ ಹೈಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುವ ವೇಳೆ ವಾಹನ ಸವಾರರಿಗೆ ಕಿರುಕುಳ ನೀಡುತ್ತಿದ್ದರು ಎಂಬ ದೂರುಗಳು ಕೇಳಿ ಬಂದಿದ್ದವು.

ಅದರಲ್ಲೂ ಸಂಚಾರಿ ಪೊಲೀಸರು ಕರ್ತವ್ಯದ ವೇಳೆ ‘ಬಾಡಿವಾರ್ನ್ ಕ್ಯಾಮೆರಾ’ಗಳನ್ನು ಕಡ್ಡಾಯವಾಗಿ ಧರಿಸಬೇಕು. ಆದರೆ ಇವರು ಉದ್ದೇಶಪೂರ್ವಕವಾಗಿ ಆಫ್ ಮಾಡಿ ಲಂಚ ಪಡೆಯುತ್ತಿದ್ದರು ಎಂದು ಆರೋಪ ಕೇಳಿ ಬಂದಿದೆ.

ಈ ಹಿನ್ನೆಲೆ ತನಿಖೆ ನಡೆಸಿದ ಇಲಾಖೆಯ ಮುಂದೆ ಮೂವರ ಲೋಪ ಸಾಬೀತಾಗಿದ್ದು, ಹೀಗಾಗಿ ಮೂವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !