October 11, 2026
Sunday, October 11, 2026
spot_img

ತುಂಗಭದ್ರಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಮೂವರು ನಾಪತ್ತೆ : ಪೋಷಕರು ಕಂಗಾಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮೀನು ಹಿಡಿಯಲೆಂದು ತುಂಗಭದ್ರಾ ನದಿಗೆ ತೆರಳಿದ್ದ ಮೂವರು ಯುವಕರು ಏಕಾಏಕಿ ನಾಪತ್ತೆಯಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ತಂಬ್ರಳ್ಳಿ ಗ್ರಾಮದ ಬಳಿ ನಡೆದಿದೆ.

ನಿನ್ನೆ ಮಧ್ಯಾಹ್ನ ಮೀನು ಹಿಡಿಯಲು ಹೋಗಿದ್ದವರು ರಾತ್ರಿಯಾದರೂ ವಾಪಾಸ್‌ ಬಾರದ ಹಿನ್ನೆಲೆ ಕುಟುಂಬದವರು ಆತಂಕಕ್ಕೀಡಾಗಿದ್ದು, ಠಾಣೆಯ ಮುಂದೆ ಕಣ್ಣೀರಿಟ್ಟಿದ್ದಾರೆ. ತುಂಗಭದ್ರಾ ನದಿಯ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿದ್ದ ರಾಜ, ಯಮನಪ್ಪ ಹಾಗೂ ಅಜ್ಜಪ್ಪ ನಾಪತ್ತೆಯಾದವರು.

ಪೊಲೀಸ್‌ ಠಾಣೆಗೆ ತೆರಳಿದ ಪೋಷಕರು ಮಕ್ಕಳು ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದಾರೆ. ಪೊಲೀಸರು ಹಾಗೂ ಸ್ಥಳೀಯರು ಬ್ಯಾಕ್‌ ವಾಟರ್ಸ್‌ ಬಳಿ ತೆರಳಿ ಶೋಧ ಆರಂಭಿಸಿದ್ದಾರೆ. ಸದ್ಯ ಎಸ್‌ಡಿಆರ್‌ಎಫ್ ತಂಡವೂ ತುಂಗಭದ್ರಾ ನದಿ ಹಿನ್ನೀರಿನಲ್ಲಿ ಶೋಧ ಕಾರ್ಯ ಮುಂದುವರಿಸಿದೆ

ಹಗರಿಬೊಮ್ಮನಹಳ್ಳಿ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿ ನಾಪತ್ತೆಯಾದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಅವರು ಬದುಕಿದ್ದಾರೋ ಇಲ್ಲವೋ ಎನ್ನುವ ಮಾಹಿತಿ ಇಲ್ಲ.

Must Read