ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಅವಘಡಗಳು ಸಂಭವಿಸುತ್ತಿವೆ.ಭಾರೀ ಮಳೆಗೆ ಮನೆಯ ಗೋಡೆ ಕುಸಿದು ಮೂರು ವರ್ಷದ ಮಗು ಮೃತಪಟ್ಟ ಘಟನೆ ಗೋಕಾಕ್ ನಗರದ ಮಹಲಿಂಗೇಶ್ವರ ಕಾಲೋನಿಯಲ್ಲಿ ಇಂದು ಮುಂಜಾನೆ ನಡೆದಿದೆ.
ಮೃತ ಮಗುವನ್ನು ಕೀರ್ತಿ ನಾಗೇಶ್ ಪೂಜಾರಿ (3) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ನಾಲ್ಕು ವರ್ಷದ ಬಾಲಕಿ ಗಾಯಗೊಂಡಿದ್ದಾಳೆ. ಅಕ್ಕ – ತಂಗಿ ರೂಮ್‌ನಲ್ಲಿ ಮಲಗಿದ್ದ ವೇಳೆ ಗೋಡೆ ಕುಸಿದಿದೆ. ಪರಿಣಾಮ ಒಂದು ಮಗು ಸ್ಥಳದಲ್ಲೇ ಸಾವಿಗೀಡಾಗಿದೆ. ಘಟನೆಯ ವೇಳೆ ಮನೆಯ ಮತ್ತೊಂದು ರೂಮ್‌ನಲ್ಲಿ ಮಗುವಿನ ತಂದೆ ತಾಯಿ ಮಲಗಿದ್ದರು ಎಂದು ತಿಳಿದು ಬಂದಿದೆ.
ಗಾಯಗೊಂಡ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಬಾಲಕಿಯ ಶವ ಗೋಕಾಕ್ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಶಿಪ್ಟ್ ಮಾಡಲಾಗಿದೆ. ಸ್ಥಳಕ್ಕೆ ಗೋಕಾಕ್ ಶಹರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.