ಹೊಸದಿಗಂತ ಡಿಜಿಟಲ್ ಡೆಸ್ಕ್:
ಅತಿ ವೇಗದಲ್ಲಿ ಹೋಗುತ್ತಿದ್ದ ಕಾರೊಂದು ಬ್ರಿಡ್ಜ್ ಮೇಲಿಂದ 20 ಅಡಿ ಕೆಳಕ್ಕೆ ಬಿದ್ದ ಪರಿಣಾಮ ಮೂವರು ಭಾರತೀಯ ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಮೆರಿಕದ ದಕ್ಷಿಣ ಕೆರೊಲಿನಾ ರಾಜ್ಯದ ಗ್ರೀನ್ವಿಲ್ಲೆ ಕೌಂಟಿ ಬಳಿ ಈ ಆಕ್ಸಿಡೆಂಟ್ ಸಂಭವಿಸಿದೆ.
ಅಪಘಾತದಲ್ಲಿ ಮೃತಪಟ್ಟ ಮೂವರು ಮಹಿಳೆಯರನ್ನು ಗುಜರಾತ್ನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾಬೆನ್ ಪಟೇಲ್, ಸಂಗೀತಾಬೆನ್ ಪಟೇಲ್ ಮತ್ತು ಮನೀಶಾಬೆನ್ ಪಟೇಲ್ ಎಂದು ಗುರುತಿಸಲಾಗಿದೆ.
ಎಸ್ಯುವಿ ಕಾರಿನ ಚಾಲಕ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಹೇಳಲಾಗಿದೆ.