Saturday, December 20, 2025

ಸಿಂಹಾಸನ ಜೋಡಣೆ: ಮೈಸೂರು ಅರಮನೆಗೆ ಅರ್ಧ ದಿನ ನೋ ಎಂಟ್ರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದಸರಾ ಹಿನ್ನೆಲೆಯಲ್ಲಿ ಅರಮನೆಯಲ್ಲಿ ಇಂದು ಸಿಂಹಾಸನ ಜೋಡಣೆ ಕಾರ್ಯ ನಡೆಯಲಿದೆ. ಈ ಹಿನ್ನೆಲೆ ಮಂಗಳವಾರ ಮಧ್ಯಾಹ್ನದ ವರೆಗೆ ಅರಮನೆ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ರಾಜವಂಶ್ಥರು ನಡೆಸುವ ಧಾರ್ಮಿಕ ಕಾರ್ಯ ಖಾಸಗಿ ದರ್ಬಾರ್‌ಗಾಗಿ ಇಂದು ಸಿಂಹಾಸನ ಜೋಡಣೆ ಮಾಡಲಾಗುವುದು. ಸ್ಟ್ರಾಂಗ್ ರೂಂನಿಂದ ಬಿಗಿ ಭದ್ರತೆಯೊಂದಿಗೆ ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಸಮ್ಮುಖದಲ್ಲಿ ಸಿಂಹಾಸನ ಜೋಡಣೆ ನಡೆಯಲಿದೆ.

ಬೆ. 8:30 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಅರಮನೆಗೆ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ. ಚಿನ್ನದ ಸಿಂಹಾಸನದ ಬಿಡಿಭಾಗ ಹಾಗೂ ಬೆಳ್ಳಿಯ ಭದ್ರಾಸನದ ಬಿಡಿ ಭಾಗಗಳನ್ನ ದರ್ಬಾರ್ ಹಾಲ್‌ಗೆ ತಂದು ಜೋಡಣೆ ಮಾಡಲಾಗುವುದು.

ಬೆಳ್ಳಿ ಭದ್ರಾಸನವನ್ನ ಕನ್ನಡಿ ತೊಟ್ಟಿಯಲ್ಲಿ ಜೋಡಣೆ ಮಾಡಲಾಗುವುದು. ಸಿಂಹಾಸನ ಜೋಡಣೆ ಕಾರ್ಯ ನಡೆಯುವ ವೇಳೆ ದರ್ಬಾಲ್ ಹಾಲ್ ಸೇರಿದಂತೆ ವಿವಿಧೆಡೆ ಅಳವಡಿಸಿರುವ ಸಿಸಿ ಕ್ಯಾಮೆರಾಗೆ ಪರದೆ ಹಾಕಲಾಗುವುದು. 

error: Content is protected !!