Thursday, June 30, 2022

Latest Posts

ಚಿತ್ರದುರ್ಗ ಜಿಲ್ಲೆಯಾದ್ಯಂತ ಅ.31ರವರೆಗೆ ’ಕ್ಲಿನ್ ಇಂಡಿಯಾ ಅಭಿಯಾನ’

ಹೊಸ ದಿಗಂತ ವರದಿ, ಚಿತ್ರದುರ್ಗ:

ಕೇಂದ್ರ ಸರ್ಕಾರದ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಅ.01 ರಿಂದ 31 ರವರೆಗೆ ಜಿಲ್ಲೆಯಾದ್ಯಂತ ’ಕ್ಲೀನ್ ಇಂಡಿಯಾ ಅಭಿಯಾನ’ ಆಯೋಜಿಸಲಾಗಿದೆ. ಸಾರ್ವಜನಿಕರ ಸಹಭಾಗಿತ್ವದಿಂದ ಚಿತ್ರದುರ್ಗ ಜಿಲ್ಲೆಯನ್ನು ಒಂದು ಸಲ ಉಪಯೋಗಿಸುವ ’ಪ್ಲಾಸ್ಟಿಕ್ ಮುಕ್ತ’ ಹಾಗೂ ’ಇ-ತ್ಯಾಜ್ಯವನ್ನು’ ಸರಿಯಾಗಿ ವಿಲೇವಾರಿ ಮಾಡುವ ಉದ್ದೇಶ ಹೊಂದಲಾಗಿದೆ.
ನೆಹರು ಯುವಕೇಂದ್ರ ಮತ್ತು ರಾಷ್ಟ್ರೀಯ ಸೇವಾ ಯೋಜನೆಗೆ ಸೇರಿದ ಯುವ ಸ್ವಯಂಸೇವಕರ ಸಮುದಾಯದ ಸಹಭಾಗಿತ್ವದಿಂದ ಹಮ್ಮಿಕೊಳ್ಳಲಾಗುತ್ತಿದ್ದು, ಪ್ರತಿ ದಿನವೂ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಒಂದು ಇಲಾಖೆಯ ಮುಖ್ಯಸ್ಥರು ನೇತೃತ್ವವಹಿಸಿ, ತಮ್ಮ ಇಲಾಖೆಯ ಸುತ್ತಮುತ್ತಲಿನ ಪ್ರದೇಶದ ಸ್ವಚ್ಛತಾ ಕಾರ್ಯ ಕೈಗೊಳ್ಳುವುದು ಹಾಗೂ ಮುಖ್ಯವಾಗಿ ಪ್ಲಾಸ್ಟಿಕ್ ಮತ್ತು ಇ-ತ್ಯಾಜ್ಯ ಸಂಗ್ರಹಣೆ ಮತ್ತು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದು, ಸಾರ್ವಜನಿಕರಿಗೆ ಸ್ವಚ್ಛತೆ ಹಾಗೂ ಒಣಕಸ-ಹಸಿಕಸ ಬೇರ್ಪಡಿಸುವ ಬಗ್ಗೆ ಮಾಹಿತಿ, ಶಿಕ್ಷಣ ಮತ್ತು ಸಂವಹನ ನಡೆಸಿ, ಅರಿವು ಮತ್ತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಆಯೋಜಿಸಲಾಗುತ್ತಿದೆ.
ಕ್ಲೀನ್ ಇಂಡಿಯಾ ಅಭಿಯಾನವನ್ನು ಅ.02 ರಂದು ಗಾಂಧಿ ಜಯಂತಿ ದಿನದಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹಾಗೂ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣರವರು ಕಾರ್ಯಕ್ರಮಕ್ಕೆ ಈಗಾಗಲೇ ಚಾಲನೆ ನೀಡಿರುತ್ತಾರೆ. ಜಿಲ್ಲೆಯಲ್ಲಿ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳು ಈ ಕಾರ್ಯವನ್ನು ಅತ್ಯುತ್ತಮವಾಗಿ, ಉತ್ಸಾಹದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ.
ಕ್ಲೀನ್ ಇಂಡಿಯಾ ಅಭಿಯಾನದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಜಿಲ್ಲೆಯ ಯುವಜನತೆಗೆ, ಯುವಕ-ಯುವತಿ ಸಂಘಗಳಿಗೆ ಹಾಗೂ ಸ್ವ-ಸಹಾಯ ಸಂಘಗಳು ಮತ್ತು ಸರ್ಕಾರೇತರ ಸಂಘ ಸಂಸ್ಥೆಗಳು ಸೇರಿದಂತೆ ಒಟ್ಟು ಮೂರು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು.
ಒಂದು ಸಲ ಉಪಯೋಗಿಸುವ ಪ್ಲಾಸ್ಟಿಕ್ ಸಂಗ್ರಹಣದ ಪ್ರತಿ ದಿನದ ವಿವರವನ್ನು ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿಗಳಾದ ಸುಹಾಸ್ ಎನ್ ಇವರ ವಾಟ್ಸ್‌ಆಪ್ ನಂ 9945038684  ಕಳುಹಿಸಿಕೊಡುವಂತೆ ಜಿಲ್ಲಾ ಯುವಜನ ಅಧಿಕಾರಿಗಳಾದ ಸುಹಾಸ್ ಎನ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss