ಥ್ರೋ ಅಥ್ಲೀಟ್‌ ನೀರಜ್ ಚೋಪ್ರಾಗೆ ಗಾಯ: ಒಸ್ಟ್ರಾವಾ ಗೋಲ್ಡನ್ ಸ್ಪೈಕ್-2024ನಿಂದ ಔಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗಾಯದ ಸಮಸ್ಯೆಯಿಂದ ಚಿನ್ನದ ಪದಕ ವಿಜೇತ ಜಾವೆಲಿನ್ ಥ್ರೋ ಅಥ್ಲೀಟ್‌ ನೀರಜ್ ಚೋಪ್ರಾ ಜೆಕ್ ರಿಪಬ್ಲಿಕ್‌ನಲ್ಲಿ ನಡೆದ ಒಸ್ಟ್ರಾವಾ ಗೋಲ್ಡನ್ ಸ್ಪೈಕ್-2024 ಅಥ್ಲೆಟಿಕ್ಸ್ ಮೀಟ್‌ನಿಂದ ಹಿಂದೆ ಸರಿದಿದ್ದಾರೆ.

ಕೆಲವು ವಾರಗಳ ಹಿಂದೆ ತರಬೇತಿಯ ಸಮಯದಲ್ಲಿ ಚೋಪ್ರಾ ಸ್ನಾಯುವಿನ ಗಾಯದಿಂದ ಬಳಲುತ್ತಿದ್ದರು. ಇದರ ಪರಿಣಾಮವಾಗಿ ಅವರು ಅಥ್ಲೆಟಿಕ್ಸ್ ಕೂಟದಿಂದ ಹಿಂದೆ ಸರಿದಿದ್ದಾರೆ. ಆದರೆ, ಮಂಗಳವಾರ ನಡೆಯಲಿರುವ ವಾರ್ಷಿಕ ಅಥ್ಲೆಟಿಕ್ಸ್ ಸ್ಪರ್ಧೆಯ 63ನೇ ಆವೃತ್ತಿಗೆ ಭಾರತದ ಜಾವೆಲಿನ್ ಥ್ರೋ ಅಥ್ಲೀಟ್‌ ಅತಿಥಿಯಾಗಿ ಹಾಜರಾಗಲಿದ್ದಾರೆ.

ಒಸ್ಟ್ರಾವಾ ಗೋಲ್ಡನ್ ಸ್ಪೈಕ್‌ನಿಂದ ಸತತ ಎರಡನೇ ಬಾರಿ ನೀರಜ್‌ ಚೋಪ್ರಾ ಹೊರಬಂದಿದ್ದಾರೆ. ಕಳೆದ ವರ್ಷವೂ ಅವರು ಸ್ಪರ್ಧಿಸಿದ್ದರು. ಆದರೆ ಸ್ನಾಯುವಿನ ಗಾಯದಿಂದಾಗಿ ಹೊರನಡೆದಿದ್ದರು.

ಪ್ಯಾರಿಸ್ ಒಲಿಂಪಿಕ್ಸ್-2024 ಸಮೀಪಿಸುತ್ತಿದೆ. ಇದಕ್ಕೂ ಮೊದಲು ನೀರಜ್ ಮೇ 11 ರಂದು ದೋಹಾ ಡೈಮಂಡ್ ಲೀಗ್‌ನಲ್ಲಿ ಸ್ಪರ್ಧಿಸಿದ್ದರು. 88.36 ಮೀ ಎಸೆಯುವ ಮೂಲಕ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದರು. ಇತ್ತೀಚೆಗೆ, ಚೋಪ್ರಾ ಭುವನೇಶ್ವರದಲ್ಲಿ ನಡೆದ ಫೆಡರೇಶನ್ ಕಪ್ ಅಥ್ಲೆಟಿಕ್ಸ್ ಮೀಟ್‌ನಲ್ಲಿ ಸ್ಪರ್ಧಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!