ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಿಂದ ತುಮಕೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಶನಿವಾರ ಮಧ್ಯಾಹ್ನ ನಡೆದಿದ್ದು, ಪ್ರಯಾಣಿಕರು ಆರೋಪಿ ಯುವಕನನ್ನು ಸ್ಥಳದಲ್ಲೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಮೂಲಗಳ ಪ್ರಕಾರ, ತುಮಕೂರು ನಿವಾಸಿಯಾದ ಜೀವನ್ ರಾಜ್ (25) ಎಂಬಾತ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಪಕ್ಕದಲ್ಲಿ ನಿಂತು ಅನುಚಿತ ವರ್ತನೆ ತೋರಿದ್ದಾನೆ. ನೆಲಮಂಗಲದ ನವಯುಗ ಟೋಲ್ ಬಳಿ ಬಸ್ ಬರುತ್ತಿದ್ದಾಗ ಯುವತಿಯ ಹೆಗಲ ಮೇಲೆ ಕೈಯಿಟ್ಟು, ನಂತರ ಪ್ಯಾಂಟ್‌ನ ಜಿಪ್ ತೆರೆದು ಹಸ್ತಮೈಥುನ ಮಾಡಿಕೊಂಡಿದ್ದಾನೆ ಎಂದು ಯುವತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಜೊತೆಗೆ ಯುವತಿಯ ಬಟ್ಟೆಯ ಮೇಲೆಯೇ ವೀರ್ಯ ಚೆಲ್ಲಿದ್ದಾನೆ.
ಘಟನೆಯಿಂದ ಕೋಪಗೊಂಡ ಯುವತಿ ತಕ್ಷಣ ಬಸ್‌ನಲ್ಲಿ ಗಲಾಟೆ ಶುರುಮಾಡಿದ್ದು, ಬಸ್‌ನಲ್ಲಿದ್ದ 60ಕ್ಕೂ ಹೆಚ್ಚು ಪ್ರಯಾಣಿಕರಲ್ಲಿ ಕೆಲವರು ಜೀವನ್ ರಾಜ್‌ನನ್ನು ಥಳಿಸಿದ್ದಾರೆ. ಯುವತಿ ತನ್ನ ತಂದೆಗೆ ಕರೆ ಮಾಡಿ ವಿಷಯ ತಿಳಿಸಿದ್ದು, ಅವರು ಕೂಡಲೇ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬಸ್ ತುಮಕೂರು ಸಮೀಪದ ಕ್ಯಾತಸಂದ್ರ ಟೋಲ್ ಬಳಿ ಬಂದಾಗ ಪೊಲೀಸರು ಸ್ಥಳಕ್ಕೆ ಧಾವಿಸಿ ಜೀವನ್ ರಾಜ್‌ನನ್ನು ಬಂಧಿಸಿದ್ದಾರೆ. ಸಂತ್ರಸ್ತ ಯುವತಿ ತುಮಕೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಕಲಂ 64 ಮತ್ತು 79 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

