ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಕಮಲ್ ಹಾಸನ್ ಕ್ಷಣೆಯಾಚಿಸದ ಹೊರದು ‘ಥಗ್ ಲೈಫ್’ ಚಿತ್ರ ರಾಜ್ಯದಲ್ಲಿ ಬಿಡುಗಡೆಗೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸ್ಪಷ್ಟವಾಗಿ ಹೇಳಿದೆ.
‘ನಾನು ಯಾವುದೇ ತಪ್ಪು ಮಾಡಿಲ್ಲ, ಕ್ಷಮೆಯಾಚಿಸುವುದಿಲ್ಲ’ ಎಂದು ಕಮಲ್ ಹಾಸನ್ ಹೇಳಿದ್ದಾರೆ. ಆದರೆ, ಕ್ಷಮೆಯಾಚಿಸದಿದ್ದರೆ ಚಿತ್ರ ಬಿಡುಗಡೆ ಮಾಡಲು ಅವಕಾಶ ನೀಡುವ ಪ್ರಶ್ನೆಯೇ ಇಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ.ನರಸಿಂಹಲು ಸ್ಪಷ್ಟಪಡಿಸಿದರು.
ಕ್ಷಮೆ ಕೇಳಿದರೂ ತಕ್ಷಣದಲ್ಲೇ ಸಿನಿಮಾ ಬಿಡುಗಡೆಗೆ ಅವಕಾಶ ನೀಡುವುದಿಲ್ಲ. ದೂರು ನೀಡಿದವರ ಜೊತೆ ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಕಮಲ್ ಹಾಸನ್ ದುಬೈನಲ್ಲಿದ್ದಾರೆ. ಮಂಗಳವಾರ ಚೆನ್ನೈಗೆ ಮರಳುತ್ತಿದ್ದಾರೆ ಎನ್ನುವ ಮಾಹಿತಿ ಇದೆ. ‘ಥಗ್‌ಲೈಫ್’ ಸಿನಿಮಾದ ವಿತರಕರು ಜೂನ್ 3ರ ಮಧ್ಯಾಹ್ನದವರೆಗೆ ಸಮಯ ಕೇಳಿದ್ದಾರೆ’ ಎಂದು ತಿಳಿಸಿದರು.