ಹೊಸದಿಗಂತ ಡಿಜಿಟಲ್ ಡೆಸ್ಕ್ :
ತೆಲುಗು ನಟ ನರೇಶ್ ಅವರ ಮನೆಯ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಈ ಕುರಿತು ನರೇಶ್ ಹೇಳಿದ್ದು, ಈ ಸಂಬಂಧ ಭಾನುವಾರ ಗಚಿಬೌಲಿ ಪೊಲೀಸರಿಗೆ ದೂರು ನೀಡಿದ್ದಾರೆ.
ಗಚಿಬೌಲಿಯಲ್ಲಿರುವ ತಮ್ಮ ನಿವಾಸ ಮತ್ತು ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಮೇಲೆ ಅಪರಿಚಿತ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ ಎಂದು ನರೇಶ್ ಹೇಳಿದ್ದಾರೆ.
ದೂರಿನ ಪ್ರಕಾರ, ಮನೆಯ ಮುಂದೆ ನಿಲ್ಲಿಸಿದ್ದ ಕಾರಿಗೆ ಹಾನಿಯಾಗಿದೆ. ನರೇಶ್ ತನ್ನ ಮಾಜಿ ಮೂರನೇ ಪತ್ನಿ ರಮ್ಯಾ ರಘುಪತಿಯ ಬಗ್ಗೆ ಅನುಮಾನ ಹೊಂದಿದ್ದಾನೆ ಎಂದಿದ್ದಾರೆ.
ಈ ನಿಟ್ಟಿನಲ್ಲಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ನಟ ಹೇಳಿದರು.