ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗಿದೆ. ಬಹುತೇಕ ರಸ್ತೆಗಳು ಭಾರೀ ಮಳೆಗೆ ನೀರು ಸಂಗ್ರಹಗೊಂಡು ವಾಹನ ಸವಾರು ಸುಗಮವಾಗಿ ಸಂಚರಿಸಲು ಪರದಾಡಿದರು.
ನಗರ ಮೆಜೆಸ್ಟಿಕ್, ಕೆ.ಆರ್.ಸರ್ಕಲ್, ಕೆ.ಆರ್.ಮಾರ್ಕೆಟ್, ವಿಜಯನಗರ, ಬನಶಂಕರಿ, ಕೆಂಗೇರಿ, ರಾಜಾಜಿನಗರ, ಶಿವಾಜಿನಗರ, ಮಲ್ಲೇಶ್ವರಂ, ಯಲಹಂಕ ಸೇರಿದಂತೆ ವಿವಿಧ ಕಡೆಗಳಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ರಸ್ತೆಗಳು ಜಲಾವೃತಗೊಂಡಿದ್ದು, ವಿವಿಧ ಕಡೆ ಟ್ರಾಫಿಕ್ ಸಮಸ್ಯೆಗಳು ಉಂಟಾಯಿತು.
ದೇವರಬೀಸನಹಳ್ಳಿ ಮೇಲ್ಸೇತುವೆ ರ‍್ಯಾಂಪ್‌ನಲ್ಲಿ ನೀರು
ಭಾರೀ ಮಳೆಯಿಂದಾಗಿ ಹುಣಸಮಾರನಹಳ್ಳಿ , ವರ್ತುರ್ ಕೋಡಿ ಫೋರಮ್ ಮಾಲ್ ರಸ್ತೆ, ದೇವರಬೀಸನಹಳ್ಳಿ ಮೇಲ್ಸೇತುವೆ ರ‍್ಯಾಂಪ್‌ನಲ್ಲಿ ನೀರು ನಿಂತ ಪರಿಣಾಮ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿದೆ.



