ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು, ಮಿಂಚು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು, ಮಿಂಚು, ಗಾಳಿ ಸಹಿತ ಭಾರೀ ಮಳೆಯಾಗಲಿದೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ.

ಮಹಾರಾಷ್ಟ್ರದ ವಿಧರ್ಭದಿಂದ ದಕ್ಷಿಣದ ತಮಿಳುನಾಡಿನವರೆಗೆ ಟ್ರಫ್ ಮುಂದುವರಿಕೆ ಹಿನ್ನೆಲೆ ಮಳೆ ಪ್ರಮಾಣ ಹೆಚ್ಚಿರುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಮುನ್ಸೂಚನೆ ಇದ್ದು, ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ.

ದಕ್ಷಿಣ ಒಳನಾಡಿಗೆ ಇಂದು, ನಾಳೆ, ಮತ್ತು ಜೂನ್ 4 ನೇ ತಾರೀಖು ಬಹುತೇಕ ಕಡೆ ಜೋರು ಮಳೆ ಸಾಧ್ಯತೆ ಇದೆ. 2,3 ನೇ ತಾರೀಖು ಸಾಧಾರಣ ಮಳೆಯಾಗಲಿದೆ. ಕರಾವಳಿಗೆ ಮುಂದಿನ 5 ದಿನ ಕೆಲವೆಡೆ ಸಾಧಾರಣ ಮಳೆ ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಕೆಲ ಕಡೆ ಮಾತ್ರ ಮಳೆ ಸಾಧ್ಯತೆ ಇದೆ. ಇನ್ನು ಬೆಂಗಳೂರಿನಲ್ಲಿ ಇಂದು, ನಾಳೆ ಗುಡುಗು ಸಹಿತ ಮಳೆ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!