Thursday, August 11, 2022

Latest Posts

ಸಿಡಿಲು ಬಡಿತ| 68 ಮಂದಿ ದುರ್ಮರಣ: ಸೆಲ್ಫಿ ತೆಗೆದುಕೊಳ್ಳುವಾಗ 11 ಜನ ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಸಿಡಿಲು ಬಡಿದು 68 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.

ಉತ್ತರ ಪ್ರದೇಶದ ಜೈಪುರದ ಅಮೆರ್ ಪ್ಯಾಲೆಸ್‌ನ ವಾಚ್‌ ಟವರ್‌ ಮೇಲೆ ಮಳೆಯಲ್ಲೇ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಸಿಡಿಲು ಬಡಿದು 11 ಮಂದಿ ಅಸುನೀಗಿದ್ದಾರೆ. ಇನ್ನೂ ಕೆಲವರು ಸಿಡಿಲು ಬಡಿದ ಭಯಕ್ಕೆ ವಾಚ್‌ ಟವರ್‌ ಮೇಲಿಂದ ಹಾರಿ ಗಂಭೀರ ಗಾಯಗೊಂಡಿದ್ದಾರೆ.

ಇನ್ನು ಉತ್ತರ ಪ್ರದೇಶದ ವಿವಿಧೆಡೆಗಳಲ್ಲಿ ಸಿಡಿಲಿನ ಬಡಿತಕ್ಕೆ 41 ಮಂದಿ ಮೃತಪಟ್ಟಿದ್ದು, ಮಧ್ಯಪ್ರದೇಶದಲ್ಲಿ 7 ಜನರು, ರಾಜಸ್ಥಾನದಲ್ಲಿ ಏಳು ಮಕ್ಕಳು ಸೇರಿದಂತೆ 20 ಮಂದಿ ಮೃತಪಟ್ಟಿದ್ದಾರೆ.

ಸಿಡಿಲು ಬಡಿತದಿಂದ ಗಾಯಗೊಂಡವರನ್ನು ಜೈಪುರದ ಸವಾಯಿ ಮನ್ ಸಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಕ್ಷಣಾ ತಂಡದ ಮೂಲಗಳು ತಿಳಿಸಿವೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss