ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ ಆರು ದಿನಗಳಲ್ಲಿ ಕರ್ನಾಟಕ ಸೇರಿ 10ಕ್ಕೂ ಅಧಿಕ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ವೇಗವಾಗಿ ಬದಲಾಗುತ್ತಿದ್ದು, ಉಷ್ಣಗಾಳಿ ಹೆಚ್ಚಾಗುತ್ತಿದೆ. ಆದರೆ ಈ ವಾತಾವರಣ ಶೀಘ್ರದಲ್ಲೇ ಬದಲಾಗಿ ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕದಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ.
ಮುಜಾಫರಾಬಾದ್, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ್ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ,ಅರುಣಾಚಲ ಪ್ರದೇ, ನಾಗಾಲ್ಯಾಂಡ್, ಅಸ್ಸಾಂ, ಮೇಘಾಲಯ ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.