September 18, 2026
Friday, September 18, 2026
spot_img

ರಾಜ್ಯದಲ್ಲಿ ಗುಡುಗು ಸಹಿತ ಮಳೆ: ಗದಗದಲ್ಲಿ ಸಿಡಿಲು ಬಡಿದು ರೈತ ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ನಿನ್ನೆ ರಾತ್ರಿಯಿಂದ ವಾತಾವರಣ ಬದಲಾಗಿದ್ದು, ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ.

ಕಿತ್ತೂರು ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಗಳ ಹಲವಾರು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ.

ಉತ್ತರ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ತಲುಪಿತ್ತು. ಸಂಜೆ ಸುರಿದ ಮಳೆಯು ಈ ಪ್ರದೇಶಗಳಲ್ಲಿ ವಾತಾವಾರಣ ಸ್ವಲ್ಪ ತಂಪಾಯಿತು. ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲ್ಲೂಕಿನಲ್ಲಿ ರೈತನೊಬ್ಬ ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ಮುತ್ತಂಗಿ ಗ್ರಾಮದ ನಿವಾಸಿ ವೈಜನಾಥ್ ಶೇರೆಗಾರ್ (60) ತನ್ನ ಜಮೀನಿನಲ್ಲಿ ದನಗಳನ್ನು ಮೇಯಿಸುತ್ತಿದ್ದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಅವರ ಮಗ ಶ್ರೀನಿವಾಸ್ ಸುಟ್ಟಗಾಯಗಳಾಗಿವೆ. ಮನ್ನಾಖೇಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !