ರಾಜ್ಯದ ಹಲವೆಡೆ ಇಂದು ಉತ್ತಮ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ರಾಜ್ಯದ ಹಲವೆಡೆ ಮೋಡ ಮುಸುಕಿದ ವಾತಾವರಣ, ಕೆಲವೆಡೆ ಮಳೆ ವಾತಾವರಣ ಮುಂದುವರಿದಿದೆ.
ಏ.14ರ ಬೆಳಿಗ್ಗೆ 8 ಗಂಟೆವರೆಗಿನ ರಾಜ್ಯದ ಹವಾಮಾನ ಮುನ್ಸೂಚನೆಯಂತೆ ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಲಿದೆ.
ಕಾಸರಗೋಡು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ, ಆಗುಂಬೆ, ಶಿೃಂಗೇರಿ, ಬಾಳೆಹೊನ್ನೂರು ಸುತ್ತಮುತ್ತ ಭಾಗಗಳಲ್ಲಿ ಕೂಡಾ ಮಳೆಯ ಮುನ್ಸೂಚನೆ ಇದೆ.
ಇನ್ನು ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ, ಉಡುಪಿ, ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ, ಚಿಕ್ಕಮಗಳೂರು ಬಹುತೇಕ ಭಾಗಗಳಲ್ಲಿ, ದಾವಣಗೆರೆ, ಚಿತ್ರದುರ್ಗ ಅಲ್ಲಲ್ಲಿ, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!