Tuesday, July 5, 2022

Latest Posts

ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ತಿಳಿಸಿದೆ.
ನಾಳೆ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ.ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಲವೆಡೆ ಆಲಿಕಲ್ಲು ಮತ್ತು ಗುಡುಗು ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರದಲ್ಲಿ ಇಂದೂ ಕೂಡ ಧಾರಾಕಾರ ಮಳೆ ಮುಂದುವರೆದಿದೆ. ಮೆಜೆಸ್ಟಿಕ್, ಕೆಆರ್ ಮಾರ್ಕೆಟ್, ಕಾರ್ಪೊರೇಷನ್, ವಿಧಾನಸೌಧ, ಶಿವಾಜಿನಗರ, ಶಾಂತಿನಗರ, ಮೈಸೂರು ರಸ್ತೆ, ಹೆಬ್ಬಾಳ, ಯಲಹಂಕ, ಕೋರಮಂಗಲ, ಆಡುಗೋಡಿ, ಜಯನಗರ ಸೇರಿದಂತೆ ಹಲವೆಡೆ ಮಳೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss