ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಸೇರಿ ಕರ್ನಾಟಕದ ವಿವಿಧೆಡೆ ಇಂದು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.
ತುಮಕೂರು, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯಪುರ, ಯಾದಗಿರಿ, ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ. ಎನ್ಆರ್ಪುರ, ಧರ್ಮಸ್ಥಳ, ಜಯಪುರ, ಸರಗೂರು, ಹಾವೇರಿ, ಕೃಷ್ಣರಾಜಪೇಟೆ, ಮಾಗಡಿ, ಚಿತ್ರದುರ್ಗ, ಟಿಜಿ ಹಳ್ಳಿ, ಕೋಲಾರ, ಚಿಕ್ಕಮಗಳೂರು, ಶೃಂಗೇರಿ, ಗುಬ್ಬಿ, ಕುಣಿಗಲ್ನಲ್ಲಿ ಮಳೆಯಾಗಿದೆ.
ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ನಿರ್ಮಾಣವಿರಲಿದ್ದು, ಗುಡುಗು ಸಹಿತ ಮಳೆಯಾಗಲಿದೆ. ಎಚ್ಎಎಲ್ನಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕೆಐಎಎಲ್ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.