ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾರವಿಡೀ ಬಿಪರ್‌ಜೊಯ್ ಚಂಡಮಾರುತ ಅಪ್ಪಳಿಸಲಿದ್ದು, ರಾಜ್ಯದಲ್ಲಿಯೂ ಮಳೆಯ ಹಾವಳಿ ತಪ್ಪುವುದಿಲ್ಲ. ರಾಜ್ಯದಲ್ಲಿ ಜೂ.19 ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆ ಹೆಚ್ಚುವ ಸಾಧ್ಯತೆ ಇದೆ. ಪ್ರತಿದಿನ ಸಂಜೆ ವೇಳೆಗೆ ರಾಜ್ಯದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ.
ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕಲಬುರಗಿ, ಕೊಪ್ಪಳ, ಮೈಸೂರು, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಳಗಾವಿ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಈ ಭಾಗಗಳಲ್ಲಿ ಮಳೆಯಾಗಲಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಿದೆ.