ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 1029 ಮಂದಿಗೆ ಕೊರೋನಾ ವೈರಸ್ ದೃಢ

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಗುರುವಾರ 1029 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 987 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 517 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಸಾವು ಸಂಭವಿಸಿಲ್ಲ.

ಕೇರಳದಲ್ಲಿ 51,739 ಹೊಸ ಪ್ರಕರಣ

ಕೇರಳದಲ್ಲಿ ಗುರುವಾರ ಹೊಸದಾಗಿ 51,739 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 47,490 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 42,653 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 11 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಗುರುವಾರ ಶೇಕಡಾ 44.60 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!