May 5, 2026
Tuesday, May 5, 2026
spot_img

ಡಿ.12ಕ್ಕೆ ಉತ್ತರಕನ್ನಡಕ್ಕೆ ಟಿಬೆಟಿಯನ್ ಧರ್ಮಗುರು ದಲೈಲಾಮಾ: ಪ್ರವಾಸಿಗರಿಗೆ ನೋ ಎಂಟ್ರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಟಿಬೆಟಿಯನ್ ಧರ್ಮಗುರು ದಲೈಲಾಮಾ ಅವರು ಡಿ. 12ರಂದು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಟಿಬೆಟಿಯನ್ ಕಾಲೋನಿಗೆ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅವರ ಸ್ವಾಗತಕ್ಕೆ ಭರದ ಸಿದ್ಧತೆಗಳು ನಡೆದಿವೆ.

ದಲೈಲಾಮಾ ಅವರನ್ನು ಸ್ವಾಗತಿಸಲು ಟಿಬೆಟಿಯನ್ ಕಾಲೋನಿ ಇದೀಗ ಟಿಬೆಟಿಯನ್ ಸಂಸ್ಕೃತಿಯಂತೆ ಶೃಂಗಾರಗೊಳ್ಳುತ್ತಿದೆ.

ಹಲವು ವರ್ಷಗಳಿಂದ ದುರಸ್ತಿ ಕಾಣದ ರಸ್ತೆಗಳು ಡಾಂಬರಿಕರಣಗೊಳ್ಳುತ್ತಿದ್ದು, ಕಾಲೋನಿಯ ಮಠಗಳಿಗೆ ಸುಣ್ಣ ಬಣ್ಣ ಬಳಿಯಲಾಗುತ್ತಿದೆ.

ಕಾಲೋನಿಯ ಪ್ರತಿ ರಸ್ತೆಗಳಲ್ಲಿ ದಲೈಲಾಮಾ ಸ್ವಾಗತದ ಬ್ಯಾನರ್, ಕಟೌಟ್‌ಗಳು ರಾರಾಜಿಸುತ್ತಿವೆ. ವ್ಯಾಪಾರಕ್ಕೆಂದು ಮುಂಬೈ, ಪುಣೆ, ಬೆಂಗಳೂರು, ದೆಹಲಿ, ಚೆನ್ನೈ, ಹಿಮಾಚ್ಚಲ ಪ್ರದೇಶ ಸೇರಿದಂತೆ ವಿವಿಧ ಕಡೆಗೆ ವಲಸೆ ಹೋಗಿದ್ದ ಇಲ್ಲಿಯ ಸಹಸ್ರಾರು ಟಿಬೆಟಿಯನ್ನರು ಇದೀಗ ಧರ್ಮ ಗುರು ಪಾದಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ, ಗೂಡಿಗೆ ಮರಳುತ್ತಿದ್ದಾರೆ.

ಡಿ.12 ರಂದು ಸುಮಾರು 45 ದಿನಗಳ ಪ್ರವಾಸಕ್ಕಾಗಿ ದಲೈ ಲಾಮಾ ಅವರು ಉತ್ತರ ಕನ್ನಡ ಜಿಲ್ಲೆಗೆ ಆಗಮಿಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !