ಹೊಸದಿಗಂತ ಡಿಜಿಟಲ್ ಡೆಸ್ಕ್:
ಚನ್ನಪಟ್ಟಣ ಉಪಚುನಾವಣೆಯ ಕಾವು ತೀವ್ರಗೊಂಡಿದ್ದು, ಬಿಜೆಪಿ ನಾಯಕರು ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಮಾತುಕತೆ ನಡೆಸಿದರು.
ಪ್ರತಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ದೆಹಲಿಗೆ ಭೇಟಿ ನೀಡಿದ್ದ ಬಿಜೆಪಿ ನಾಯಕರು ಜೆಪಿ ನಡ್ಡಾ ಅವರ ನಿವಾಸದಲ್ಲಿ ಸುಮಾರು 30 ನಿಮಿಷಗಳ ಕಾಲ ಚುನಾವಣೆ ಕುರಿತು ಚರ್ಚೆ ನಡೆಸಿದರು.
ರಾಜ್ಯಾಧ್ಯಕ್ಷರ ಸಭೆಯ ಬಳಿಕ ಮಾತನಾಡಿದ ಆರ್.ಅಶೋಕ್, ನಿನ್ನೆ ರಾತ್ರಿ ಚನ್ನಪಟ್ಟಣದ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ. ಇಂದು ನಾವು ಬಿಎಲ್ ಸಂತೋಷ್ ಮತ್ತು ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಮಾತನಾಡಿದ್ದೇವೆ. ಚನ್ನಪಟ್ಟಣದ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ ಎಂದರು.