ಟಿಕೆಟ್ ವಿಚಾರಕ್ಕೆ ಕಿರಿಕ್: ಮಹಿಳೆಯ ಮೇಲೆ ಹಲ್ಲೆ ಮಾಡಿದ BMTC ಬಸ್ ಕಂಡೆಕ್ಟರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ನಿರ್ವಾಹಕ ಮಹಿಳೆಯ ಮೇಲೆ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇಂದು ಬೆಳಿಗ್ಗೆ 10 ಗಂಟೆಗೆ ಈ ಘಟನೆ ಸಂಭವಿಸಿದ್ದು, ಚಲಿಸುತ್ತಿರುವ ಬಸ್ ನಲ್ಲಿ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ಬಸ್ ನಿರ್ವಾಹಕನ ಜೊತೆಗೆ ಮಹಿಳೆಯೊಬ್ಬರು ಕಿರಿಕ್ ಮಾಡಿಕೊಂಡಿದ್ದಾರೆ.ಈ ವೇಳೆ ಕುಪಿತುಕೊಂಡ ನಿರ್ವಾಹಕಮಹಿಳೆಯ ಮೇಲೆ ಹಲ್ಲೆ ಮಾಡಿದ್ದಾನೆ.

ಹಲ್ಲೆಯ ದೃಶ್ಯ ಪ್ರಯಾಣಿಕರ ಮೊಬೈಲ್ ನಲ್ಲಿ ಸೆರೆಯಾಗಿದೆ ಎಂದು ತಿಳಿದುಬಂದಿದೆ.ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!