ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಗೆ ಟಿಕೆಟ್ ಸಿಗದ ಕಾರಣ ಲೋಕ ಜನಶಕ್ತಿ ಪಕ್ಷದ 22 ನಾಯಕರು ಏಕಕಾಲಕ್ಕೆ ರಾಜೀನಾಮೆ ನೀಡಿದ್ದಾರೆ.
ಚಿರಾಗ್ ಪಾಸ್ವಾನ್ ನೇತೃತ್ವದ ಪಕ್ಷದ ನಾಯಕರು ರಾಜೀನಾಮೆ ನೀಡಿದ್ದು, ಹಣಕ್ಕಾಗಿ ಟಿಕೆಟ್ ಮಾರಾಟದ ಆರೋಪ ಮಾಡಿದ್ದಾರೆ.
ರಾಜೀನಾಮೆ ನೀಡಿದ ಪ್ರಮುಖರಲ್ಲಿ ಮಾಜಿ ಸಚಿವ ರೇಣು ಕುಶ್ವಾಹ, ಮಾಜಿ ಶಾಸಕ ಮತ್ತು ಎಲ್ಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್, ರಾಜ್ಯ ಸಂಘಟನೆ ಸಚಿವ ರವೀಂದ್ರ ಸಿಂಗ್, ಅಜಯ್ ಕುಶ್ವಾಹ, ಸಂಜಯ್ ಸಿಂಗ್ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜೇಶ್ ಡಾಂಗಿ ಸೇರಿದ್ದಾರೆ.
ಪಕ್ಷಕ್ಕೆ ರಾಜೀನಾಮೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಂಸದೆ ರೇಣು ಕುಶ್ವಾಹಾ, ಹೊರಗಿನವರಿಗೆ ಟಿಕೆಟ್ ಕೊಡುವ ಬದಲು ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ನೀಡಬೇಕು. ಹೊರಗಿನವರಿಗೆ ಟಿಕೆಟ್ ನೀಡಲಾಗಿದೆ ಎಂದರೆ ನಿಮ್ಮ ಪಕ್ಷದಲ್ಲಿ ನಾವ್ಯಾರು ಸಮರ್ಥರು ಇಲ್ವಾ? ಎಂದು ಪ್ರಶ್ನಿಸಿದ್ದಾರೆ.