ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯನ್ ಪ್ರೀಮಿಯರ್ ಲೀಗ್ಗೆ ದಿನಗಣನೆ ಆರಂಭವಾಗಿದ್ದು, ಬೆಂಗಳೂರಿನಲ್ಲಿ ಕ್ರಿಕೆಟ್ ಫೀವರ್ ಜೋರಾಗಿದೆ.
ಇಂದಿನಿಂದ ಆರ್ಸಿಬಿ ತಂಡದ ತವರು ಪಂದ್ಯಗಳಿಗೆ ಟಿಕೆಟ್ ಖರೀದಿಸಲು ಬಾಕ್ಸ್ ಆಫೀಸ್ ಸೇಲ್ ಶುರುವಾಗಿದ್ದು, ಬೆಳಗ್ಗೆಯಿಂದಲೇ ಅಭಿಮಾನಿಗಳು ಸಾಲುಗಟ್ಟಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜಮಾಯಿಸಿದ್ದಾರೆ.
ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಪಂದ್ಯದ ಟಿಕೆಟ್ ಖರೀದಿಗೆ ಅವಕಾಶ ಇದ್ದು, ಅಭಿಮಾನಿಗಳು ಟಿಕೆಟ್ ಖರೀದಿಗೆ ಮುಗಿಬಿದ್ದಿದ್ದಾರೆ. ಬಿಸಿಲಿಗೂ ಕ್ಯಾರೆ ಎನ್ನದ ಜನ ನೂಕುನುಗ್ಗಲಿನಲ್ಲಿ ಟಿಕೆಟ್ ಪಡೆದಿದ್ದಾರೆ.