Monday, December 22, 2025

ಹುಲಿ ದಾಳಿ ಹಿನ್ನೆಲೆ: ನಾಗರಹೊಳೆ, ಬಂಡೀಪುರ ಸಫಾರಿ ಸ್ಥಗಿತಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಘೋಷಿಸಿದ್ದಾರೆ.
ಇದೇ ವೇಳೆ ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸುವಂತೆ ಸೂಚಿಸಿದ್ದಾರೆ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಅವರು, ಹುಲಿ ದಾಳಿಯಿಂದ ಚೌಡಯ್ಯ ನಾಯ್ಕ ಎಂಬುವವರು ಮೃತಪಟ್ಟಿರುವ ಬಗ್ಗೆ ನೋವು ವ್ಯಕ್ತಪಡಿಸಿದ್ದಾರೆ.
ಬಂಡೀಪುರ, ನಾಗರಹೊಳೆ ಸಫಾರಿ ಕಾರ್ಯದಲ್ಲಿ ನಿಯೋಜನೆಗೊಂಡಿರುವ ಎಲ್ಲಾ ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಿ, ಹುಲಿ ಯೋಜನೆಯ ನಿರ್ದೇಶಕರು ಸ್ಥಳದಲ್ಲೇ ಮೊಕ್ಕಾಂ ಹೂಡಿ, ವ್ಯಾಘ್ರನ ಸೆರೆ ಹಿಡಿಯುವಂತೆ ಸೂಚನೆ ನೀಡಿದ್ದಾರೆ.

error: Content is protected !!