ಹೊಸದಿಗಂತ ವರದಿ ಮಡಿಕೇರಿ:
ಗದ್ದೆಯಲ್ಲಿ ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಹಾಡಹಗಲೇ ಹುಲಿ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ದಕ್ಷಿಣ ಕೊಡಗಿನಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಪೊನ್ನಂಪೇಟೆ ತಾಲೂಕಿನ ನಿಡುಗುಂಬ ಎಂಬಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ಸಿ. ಬೋಪಣ್ಣಿ(ಬೋಪಯ್ಯ) ಎಂಬುವರಿಗೆ ಸೇರಿದ ಹಸು ಹುಲಿ ದಾಳಿಗೆ ಸ್ಥಳದಲ್ಲೇ ಅಸು ನೀಗಿದೆ.
ಶನಿವಾರ ಬೆಳಗ್ಗೆ ಸುಮಾರು 10 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಾಡಹಗಲೇ ಹುಲಿ ದಾಳಿ ನಡೆಸಿರುವ ಘಟನೆಯಿಂದ ಭಯಭೀತರಾಗಿರುವ ಗ್ರಾಮಸ್ಥರು,ಹುಲಿಯನ್ನು ಪತ್ತೆಹಚ್ಚಿ ಸೆರೆಹಿಡಿಯುವಂತೆ ಆಗ್ರಹಿಸಿದ್ದಾರೆ.