ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಕೊಡಗು:
ದಕ್ಷಿಣ ಕೊಡಗಿನಲ್ಲಿ ವ್ಯಾಘ್ರನ ಅಟ್ಟಹಾಸ ಮತ್ತೆ ಮುಂದುವರಿದಿದೆ.
ಬೆಸಗೂರು ಗ್ರಾಮ ಬಾಚಮಾಡ ರಾಜಪ್ಪ(ಪ್ರಕಾಶ್) ಅವರ ಕೊಟ್ಟಿಗೆಯಲ್ಲಿದ್ದ ಒಂದು ಕರುವನ್ನು ಕೊಂದು, ಮತ್ತೊಂದು ಕರುವನ್ನು ಎಳೆದೊಯ್ಯಲು ಯತ್ನಿಸಿದ ಘಟನೆ ತಡರಾತ್ರಿ ನಡೆದಿದೆ.
ಈ ವೇಳೆ ಹಸು ಅರಚಾಡಿದೆ ಶಬ್ಧ ಕೇಳಿ ಮನೆಯಿಂದ ಹೊರ ಬಂದ ರಾಜಪ್ಪ, ಗುಂಡು ಹಾರಿಸಿದರು, ಗುಂಡಿನ ಸದ್ದಿಗೆ ಕರುವನ್ನು ಸುಮಾರು ನೂರು ಮೀಟರ್ ದೂರದಲ್ಲಿ ಬಿಟ್ಟು ಹುಲಿ ಪರಾರಿಯಾಗಿದೆ.
ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಕಳೆದ ಎರಡು ದಿನಗಳ ಹಿಂದೆಯಷ್ಟೇ ಬೆಕ್ಕೆಸೊಡ್ಲೂರು ಗ್ರಾಮದಲ್ಲಿ ಮಲ್ಲಮಾಡ ಉಷಾ ಎಂಬುವರಿಗೆ ಸೇರಿದ ಹಸುವನ್ನು ಹುಲಿ ಕೊಂದು ಹಾಕಿತ್ತು.